Kichcha Sudeep: ನಟ ದರ್ಶನ್ ಮತ್ತು ಧ್ರುವ ಸರ್ಜಾ ನಡುವಿನ ಮನಸ್ತಾಪದ ಬಗ್ಗೆ ಚಿತ್ರರಂಗದಲ್ಲಿ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್ ಅವರು ಆಡಿರುವ ಮಾತುಗಳು ಕುತೂಹಲ ಮೂಡಿಸಿವೆ. ಬೆಂಗಳೂರು: ನಟ ದರ್ಶನ್ ಹಾಗೂ ಸುದೀಪ್ ಇಬ್ಬರ ನಡುವೆ ಮನಸ್ತಾಪ ಇರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ, ಈ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಇಬ್ಬರು ಸ್ಟಾರ್ ನಟರ ಮಧ್ಯೆ ಎಲ್ಲವೂ ಸರಿಯಿಲ್ಲ ಎಂಬುವುದು ಮತ್ತೊಮ್ಮೆ ಬಹಿರಂಗವಾಗಿದ್ದು, ಇದಕ್ಕೆ ಕಾರಣ ಕಿಚ್ಚ ಸುದೀಪ್ ಅವರು ನೀಡಿರುವ ಹೇಳಿಕೆ. ಹೌದು, ಕೆಸಿಸಿ ಕ್ರಿಕೆಟ್ ಕಪ್ ಕುರಿತ ಸುದ್ದಿಗೋಷ್ಠಿಯಲ್ಲಿ ನಟ ಕಿಚ್ಚ ಸುದೀಪ್ ಅವರು ಆಡಿರುವ ಮಾತುಗಳು ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗೆ ಕಾವೇರಿ ನೀರಿಗಾಗಿ ನಡೆದ ಪ್ರತಿಭಟನೆ ವೇಳೆ ದರ್ಶನ್ ಮತ್ತು ಧ್ರುವ ಸರ್ಜಾ ಪರಸ್ಪರ ಮಾತನಾಡದ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ನಂತರ ದರ್ಶನ್ ಜತೆ ಮನಸ್ತಾಪ ಇರುವುದು ನಿಜ ಎಂದು ಧ್ರುವ ಹೇಳಿದ್ದರು. ಹೀಗಾಗಿ ಧ್ರುವ ಸರ್ಜಾರನ್ನು ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ್ ಅಭಿಮಾನಿಗಳು ಟ್ರೋಲ್ ಮಾಡಿದ್ದರು. ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ವರದಿಗಾರರೊಬ್ಬರು ಕೆಸಿಸಿ ಪಂದ್ಯಗಳಿಗೆ ದರ್ಶನ್, ಯಶ್, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ ಅವರನ್ನು ಕರೆದಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ...
Actress Leelavathi: ರವೀಂದ್ರ ಕಲಾಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಎಸ್.ಯರಿಯೂರಪ್ಪ ಸೇರಿ ರಾಜಕೀಯ ನಾಯಕರು ಹಾಗೂ ಚಿತ್ರರಂಗದ ಗಣ್ಯರು, ನಟಿ ಲೀಲಾವತಿ ಅವರ ಅಂತಿಮ ದರ್ಶನ ಪಡೆದರು. ಬೆಂಗಳೂರು: ನೆಲಮಂಗಲದ ಅಂಬೇಡ್ಕರ್ ಮೈದಾನದ ಬಳಿಕ ಹಿರಿಯ ನಟಿ ಲೀಲಾವತಿ ಅವರ (Actress Leelavathi) ಅಂತಿಮ ದರ್ಶನಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಎಸ್.ಯರಿಯೂರಪ್ಪ ಸೇರಿ ರಾಜಕೀಯ ನಾಯಕರು ಹಾಗೂ ಚಿತ್ರರಂಗದ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಅಂತಿಮ ದರ್ಶನ ಪಡೆದ ಬಳಿಕ ವಿನೋದ್ ರಾಜ್ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ತಬ್ಬಿಕೊಂಡು ಸಾಂತ್ವನ ಹೇಳಿದರು. ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಸೋಮಣ್ಣ, ವಾಟಾಳ್ ನಾಗರಾಜ್, ನಟ ರಮೇಶ್ ಅರವಿಂದ್, ಉಪೇಂದ್ರ, ದ್ವಾರಕೀಶ್, ಶ್ರೀನಾಥ್, ಸಾಧು ಕೋಕಿಲ, ನಟಿ ತಾರಾ, ಶೃತಿ, ಉಮಾಶ್ರೀ, ಪೂಜಾ ಗಾಂಧಿ, ಸುಧಾರಾಣಿ ಮತ್ತಿತರ ಚಿತ್ರರಂಗದ ಕಲಾವಿದರು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಲೀಲಾವತಿ ಅವರ ಅಂತಿಮ ದರ್ಶನ ಪಡೆದರು. ಡಿಸಿಎಂ ಡಿಕೆ ಶಿವಕುಮಾರ್ ಅವರು ಅಂತಿಮ ನಮನ ಸಲ್ಲಿಸಿದರು ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ದರ...