Rishab Shetty: ಕಾಂತಾರ-2 ಸಿನಿಮಾ ಅಪ್‌ಡೇಟ್‌ಗಾಗಿ ಸಿನಿರಸಿಕರು ಹಲವು ದಿನಗಳಿಂದ ಕಾದು ಕುಳಿತಿದ್ದರು. ಇದೀಗ ಸಿನಿಮಾದ ಫಸ್ಟ್ ಲುಕ್ ರಿವೀಲ್ ಯಾವಾಗ ಎಂಬುದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಬೆಂಗಳೂರು: ʻಕಾಂತಾರʼ ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿ ಹಾಗೂ ನಟಿಸಿದ್ದ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ನಿರ್ಮಿಸಿತ್ತು. ಕೆಜಿಎಫ್ ಚಾಪ್ಟರ್ 2 (KGF Chapter 2) ಪ್ಯಾನ್-ಇಂಡಿಯಾ ಮಟ್ಟದಲ್ಲಿ ಹೇಗೆ ಖ್ಯಾತಿ ಗಳಿಸಿತೋ ಅದೇ ರೀತಿ ಕಾಂತಾರ 2 ಕೂಡ ಅಷ್ಟೇ ಎತ್ತರದ ನಿರೀಕ್ಷೆಯನ್ನು ಹೊತ್ತುಕೊಂಡಿದೆ. ಕಾಂತಾರ-2 ಸಿನಿಮಾ ಅಪ್‌ಡೇಟ್‌ಗಾಗಿ ಸಿನಿರಸಿಕರು ಹಲವು ದಿನಗಳಿಂದ ಕಾದು ಕುಳಿತ್ತಿದ್ದರು. ಇದೀಗ ಸಿನಿಮಾದ ಫಸ್ಟ್ ಲುಕ್ ರಿವೀಲ್ ಯಾವಾಗ ಎಂಬುದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ʻʻಇದು ಬರೀ ಬೆಳಕಲ್ಲ. ದರ್ಶನ. ನವೆಂಬರ್ 27ಕ್ಕೆ ಚಿತ್ರದ ಫಸ್ಟ್ ಲುಕ್ ರಿವೀಲ್ʼʼಎಂದು ರಿಷಬ್ ಪೋಸ್ಟ್ ಹಂಚಿಕೊಂಡಿದ್ದಾರೆ. ಕಾಂತಾರ 1ರ ಪ್ರಮುಖ ಹೈಲೈಟ್ ಎಂದರೆ ʻವರಾಹ ರೂಪಂʼ ಹಾಡು. ಈ ಹಾಡು ವಿವಾದಕ್ಕೆ ಎಷ್ಟು ಕಾರಣವಾಗಿತ್ತೋ ಅಷ್ಟೇ ಖ್ಯಾತಿಯನ್ನು ಪಡೆಯಿತು.
ʼಕಾಂತಾರʼವನ್ನು ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣ ಮಾಡಿ ವಿಶ್ವಾದ್ಯಂತ 400 ಕೋಟಿ ರೂ.ಗಳನ್ನು ಗಳಿಸಿತು. ಕಾಂತಾರ ಸಿನಿಮಾ ಸಾರ್ವಕಾಲಿಕವಾಗಿ ಕನ್ನಡದ ಎರಡನೇ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಹೊರಹೊಮ್ಮಿತು. ಈಗಾಗಲೇ ಕಾಂತಾರ 2 ಸಿನಿಮಾ ಕೆಲಸಗಳು ಭರದಿಂದ ಸಾಗಿದೆ. ವರದಿಗಳ ಪ್ರಕಾರ ಕಾಂತಾರ 2 ಸಿನಿಮಾ ಬರೋಬ್ಬರಿ 125 ಕೋಟಿ ರೂ. ಬಜೆಟ್‌ನಲ್ಲಿ (budget of 125 crores) ನಿರ್ಮಾಣವಾಗುತ್ತಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.
ಕಾಂತಾರ ಸಿನಿಮಾ ಹಿಟ್ ಆಗುತ್ತಿದ್ದಂತೆಯೇ ಬೇರೆ ಸಿನಿಮಾ ರಂಗದಿಂದ ರಿಷಬ್ ಶೆಟ್ಟಿಗೆ (Rishabh Shetty) ಆಫರ್ ಬಂದಿದ್ದು ನಿಜ ಎಂದಿದ್ದಾರೆ ರಿಷಬ್. ʻʻಬೇರೆ ಭಾಷೆಗಳಿಂದ ಹಲವು ಸಿನಿಮಾ ಅವಕಾಶಗಳು ಬಂದಿದ್ದವು. ಆದರೆ ನನಗೆ ‘ಕಾಂತಾರ’ವೇ ಆದ್ಯತೆ. ಕಾಂತಾರ’ದ ಯಶಸ್ಸಿಗೆ ಕನ್ನಡಿಗರು ಕಾರಣ. ಇವರು ನೀಡಿರುವ ಯಶಸ್ಸಿನ ಬೆನ್ನಲ್ಲೇ ಬೇರೆ ಭಾಷೆಯಲ್ಲಿ ಅವಕಾಶ ಬಂತೆಂದು ಓಡಿ ಹೋಗುವುದಿಲ್ಲ. ಹೊರಗಡೆಯಿಂದ ಬಂದ ತಂತ್ರಜ್ಞರು, ನಿರ್ದೇಶಕರು ಕನ್ನಡ ಸಿನಿಮಾ ಮಾಡಿ ಪ್ರಪಂಚದಾದ್ಯಂತ ತೆಗೆದುಕೊಂಡು ಹೋದರೆ ಅಭ್ಯಂತರವಿಲ್ಲ. ನನ್ನ ಆದ್ಯತೆ ಕನ್ನಡ ಸಿನಿಮಾ. “ಕಾಂತಾರ-2′ ಪೂರ್ಣಗೊಂಡ ಬಳಿಕ ಮುಂದಿನ ಸಿನಿಮಾಗಳ ಬಗ್ಗೆ ಯೋಚಿಸುವೆ’ ಎಂದರು ರಿಷಬ್.
ಮೂಲತಃ ಲೇಖನವನ್ನು ಇಲ್ಲಿ ಪ್ರಕಟಿಸಲಾಗಿದೆ: 👉 rishab shetty kantara 2
ಇಂತಹ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 👉 Kannada Cinema Updates
ಇಲ್ಲಿ ನೀವು ಇತರ ಆಸಕ್ತಿದಾಯಕ ಲೇಖನಗಳನ್ನು ಓದಬಹುದು..
- https://latestcinemanewstoday.blogspot.com/2023/12/blog-post.html
- https://latestcinemanewstoday.blogspot.com/2023/12/Pooja%20Gandhi.html
- https://latestcinemanewstoday.blogspot.com/2023/11/blog-post_29.html
- https://latestcinemanewstoday.blogspot.com/2023/11/blog-post.html
- https://latestcinemanewstoday.blogspot.com/2023/11/Kannada%20New%20Movie.html
- https://latestcinemanewstoday.blogspot.com/2023/11/vasuki-vaibhav.html

Comments
Post a Comment