Skip to main content

Vasuki Vaibhav: ವೈವಾಹಿಕ ಜೀವನಕ್ಕೆ ಕಾಲಿಟ್ಟ ವಾಸುಕಿ ವೈಭವ್!



 ಸ್ಯಾಂಡಲ್‌ವುಡ್‌ ಗಾಯಕ, ಯುವ ಸಂಗೀತ ನಿರ್ದೇಶಕ, ನಟ ವಾಸುಕಿ ವೈಭವ್ (Vasuki Vaibhav)​ ಅವರು ಇಂದು (ನವೆಂಬರ್​ 16) ಜೆ ಪಿ ನಗರದ. ಸಂಸ್ಕ್ರತಿ ಗೋಕುಲಂ ಕಲ್ಯಾಣ ಮಂಟಪದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಜತೆ ಅವರು ಸಪ್ತಪದಿ ತುಳಿದಿದ್ದಾರೆ. ಕೇವಲ ಕುಟುಂಬದವರು, ಆಪ್ತರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಮದುವೆ ಕಾರ್ಯಗಳು ನಡೆದಿದೆ. ಇದೀಗ ವಾಸುಕಿ ಫ್ಯಾನ್ಸ್‌ ಸೇರಿದಂತೆ ಸಿನಿ ಗಣ್ಯರು ನವ ದಂಪತಿಗಳಿಗೆ ಶುಭ ಹಾರೈಸಿದ್ದಾರೆ.

ಬೃಂದಾ ರಂಗಕರ್ಮಿ ಮತ್ತು ಶಿಕ್ಷಕಿ. ವಾಸುಕಿ ಮತ್ತು ಬೃಂದಾ ಅವರು ತಮ್ಮ ಪ್ರೀತಿಯ ಬಗ್ಗೆ ಸಾರ್ವಜನಿಕವಾಗಿ ಹೆಚ್ಚೇನೂ ಹೇಳಿಕೊಂಡಿರಲಿಲ್ಲ. ಈಗ ಅವರು ಬದುಕಿನ ಪ್ರಮುಖ ಘಟ್ಟಕ್ಕೆ ಬಂದಿದ್ದಾರೆ. ಚಿತ್ರರಂಗದಲ್ಲಿ ಬ್ಯುಸಿ ಆಗಿರುವ ವಾಸುಕಿ ವೈಭವ್​ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ.

ವಾಸುಕಿ ವೈಭವ್‌ ಈಗ ರಂಗಭೂಮಿ ಕಲಾವಿದ, ಗೀತ ರಚನಕಾರ, ಸಂಗೀತ ನಿರ್ದೇಶಕ ಮತ್ತು ಗಾಯಕರಾಗಿ ಖ್ಯಾತಿ ಪಡೆಯುತ್ತಿದ್ದಾರೆ. 2016ರಲ್ಲಿ ತೆರೆಗೆ ಬಂದ ʼಊರ್ವಿʼ ಚಿತ್ರದ ಮೂಲಕ ಅವರು ನಟನೆಯನ್ನು ಪ್ರಾರಂಭಿಸಿದ್ದರು. ವಸುಂಧರಾ (2014), ಪಟ್ಟಾಭಿಷೇಕ (2015), ರಾಮ ರಾಮ ರೇ (2016) , ಹ್ಯಾಪಿ ನ್ಯೂ ಇಯರ್ (2017)‌ , ವಿಸ್ಮಯ ಹೀಗೆ ಹಲವಾರು ಚಿತ್ರಗಳಿಗೆ ಅವರು ತಮ್ಮ ಧ್ವನಿಯನ್ನು ನೀಡಿದ್ದಾರೆ. ಚೂರಿಕಟ್ಟೆ (2018) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು, ಹರಿಕಥೆ ಅಲ್ಲ ಗಿರಿಕಥೆ’, ‘ತತ್ಸಮ ತದ್ಭವʼ ಇವರ ಸಂಗೀತ ಸಂಯೋಜನೆಯ ಪ್ರಮುಖ ಚಿತ್ರಗಳು.

ಮೂಲತಃ ಲೇಖನವನ್ನು ಇಲ್ಲಿ ಪ್ರಕಟಿಸಲಾಗಿದೆ: 👉 Kannada News

Originally published on : Read more about Latest Cinema Updates

Comments

Popular posts from this blog

Kichcha Sudeep: ನಿಮ್ಗೆ ದರ್ಶನ್‌, ಯಶ್‌ ಮಾತ್ರ ಕಾಣೋದಾ? ಧ್ರುವ ಪರ ನಿಂತ ಸುದೀಪ್‌!

 Kichcha Sudeep: ನಟ ದರ್ಶನ್‌ ಮತ್ತು ಧ್ರುವ ಸರ್ಜಾ ನಡುವಿನ ಮನಸ್ತಾಪದ ಬಗ್ಗೆ ಚಿತ್ರರಂಗದಲ್ಲಿ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್‌ ಅವರು ಆಡಿರುವ ಮಾತುಗಳು ಕುತೂಹಲ ಮೂಡಿಸಿವೆ. ಬೆಂಗಳೂರು:  ನಟ ದರ್ಶನ್ ಹಾಗೂ ಸುದೀಪ್ ಇಬ್ಬರ ನಡುವೆ ಮನಸ್ತಾಪ ಇರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ, ಈ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಇಬ್ಬರು ಸ್ಟಾರ್‌ ನಟರ ಮಧ್ಯೆ ಎಲ್ಲವೂ ಸರಿಯಿಲ್ಲ ಎಂಬುವುದು ಮತ್ತೊಮ್ಮೆ ಬಹಿರಂಗವಾಗಿದ್ದು, ಇದಕ್ಕೆ ಕಾರಣ ಕಿಚ್ಚ ಸುದೀಪ್‌ ಅವರು ನೀಡಿರುವ ಹೇಳಿಕೆ. ಹೌದು, ಕೆಸಿಸಿ ಕ್ರಿಕೆಟ್‌ ಕಪ್‌ ಕುರಿತ ಸುದ್ದಿಗೋಷ್ಠಿಯಲ್ಲಿ ನಟ ಕಿಚ್ಚ ಸುದೀಪ್‌ ಅವರು ಆಡಿರುವ ಮಾತುಗಳು ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗೆ ಕಾವೇರಿ ನೀರಿಗಾಗಿ ನಡೆದ ಪ್ರತಿಭಟನೆ ವೇಳೆ ದರ್ಶನ್‌ ಮತ್ತು ಧ್ರುವ ಸರ್ಜಾ ಪರಸ್ಪರ ಮಾತನಾಡದ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ನಂತರ ದರ್ಶನ್‌ ಜತೆ ಮನಸ್ತಾಪ ಇರುವುದು ನಿಜ ಎಂದು ಧ್ರುವ ಹೇಳಿದ್ದರು. ಹೀಗಾಗಿ ಧ್ರುವ ಸರ್ಜಾರನ್ನು ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ್‌ ಅಭಿಮಾನಿಗಳು ಟ್ರೋಲ್‌ ಮಾಡಿದ್ದರು. ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ವರದಿಗಾರರೊಬ್ಬರು ಕೆಸಿಸಿ ಪಂದ್ಯಗಳಿಗೆ ದರ್ಶನ್, ಯಶ್, ರಿಷಬ್‌ ಶೆಟ್ಟಿ, ರಕ್ಷಿತ್‌ ಶೆಟ್ಟಿ, ರಾಜ್‌ ಬಿ ಶೆಟ್ಟಿ ಅವರನ್ನು ಕರೆದಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ...

Kannada New Movie: ಸೆಟ್ಟೇರಿಯೇ ಬಿಡ್ತು ಚಟ್ಟ ಸಿನಿಮಾ; ನೀವಂದುಕೊಂಡಂತಲ್ಲ ಇದು!

  Kannada New Movie: ಬಗೆಬಗೆಯ ಶೀರ್ಷಿಕೆಗಳ ಮೂಲಕವೇ ಸಿನಿಮಾಗಳು ಗಮನ ಸೆಳೆಯುತ್ತಿವೆ. ಇದೀಗ ಅಂಥದ್ದೇ ವಿಭಿನ್ನ ಸಿನಿಮಾ ಮೂಲಕ ಗಮನ ಸೆಳೆಯುತ್ತಿದೆ ‘ಚಟ್ಟ’ ಸಿನಿಮಾ. ಬೆಂಗಳೂರು:  ಶೀರ್ಷಿಕೆಯೇ ಸಿನಿಮಾ (Kannada New Movie) ಪ್ರೇಕ್ಷಕರಿಗೆ ಮೊದಲ ಆಮಂತ್ರಣ. ಸಿನಿಮಾ ಮೇಕರ್‌ಗಳು ಅದನ್ನೇ ಗಮನದಲ್ಲಿಟ್ಟುಕೊಂಡು ಏನಾದರೊಂದು ಹೊಸದನ್ನು ನೀಡಬೇಕೆನ್ನುವ ಆಶಯ ನಿರ್ಮಾಪಕರದ್ದು. ಈ ನಡುವೆ ಬಗೆಬಗೆಯ ಶೀರ್ಷಿಕೆಗಳ ಮೂಲಕವೇ ಸಿನಿಮಾಗಳು ಸೆಟ್ಟೇರುತ್ತಿವೆ. ಇದೀಗ ಅಂಥದ್ದೇ ವಿಭಿನ್ನ ಸಿನಿಮಾ ಮೂಲಕ ಗಮನ ಸೆಳೆಯುತ್ತಿದೆ ‘ಚಟ್ಟ’ ಸಿನಿಮಾ. ನಿರ್ದೇಶಕ ಭಾನು ಪ್ರಕಾಶ್ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶನದ ಅಖಾಡಕ್ಕೆ ಧುಮುಕಿದ್ದಾರೆ. ‘ಕೇರ್ ಆಫ್ ಫುಟ್ಬಾತ್’ ಸೇರಿದಂತೆ ಒಂದಷ್ಟು ಕನ್ನಡ ಹಾಗೂ ತೆಲುಗು ಇಂಡಸ್ಟ್ರೀಯಲ್ಲಿಯೂ ನಿರ್ದೇಶನದ ಪಟ್ಟುಗಳನ್ನು ಕಲಿತುಕೊಂಡಿರುವ ಭಾನು ಪ್ರಕಾಶ್, ಈ ಭರವಸೆಯೊಂದಿಗೆ ಚಟ್ಟ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಅದ್ಧೂರಿಯಾಗಿ ಸೆಟ್ ಹಾಕಿ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಮಾಡಲಾಗಿದೆ. ಕವಿರತ್ನ ವಿ.ನಾಗೇಂದ್ರ ಪ್ರಸಾದ್, ನಿರ್ದೇಶಕ ಜೋಸೈಮನ್ ಮುಖ್ಯ ಅತಿಥಿಗಳಾಗಿ ಭಾಗಿಯಾಗಿ ಭಾನು ಪ್ರಕಾಶ್ ಹೊಸ ಕನಸಿಗೆ ಜತೆಯಾದರು. ಈ ವೇಳೆ ನಿರ್ದೇಶಕ ಭಾನು ಪ್ರಕಾಶ್ ಮಾತನಾಡಿ, ʻʻಚಟ್ಟ ಎಂದರೆ ನಾವು ಅಂದುಕೊಂಡಂತೆ ಎತ್ತಿಕೊಂಡು ಹೋಗುವುದಲ್ಲ....

Kantara Movie: ಯೂಟ್ಯೂಬ್​ನಲ್ಲಿ ದಾಖಲೆ ಬರೆದ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್; ವೀವ್ಸ್ ಎಷ್ಟು?

 K antara Movie: ಯೂಟ್ಯೂಬ್​ನಲ್ಲಿ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್ ದಾಖಲೆ ಬರೆದಿದೆ. ಯೂಟ್ಯೂಬ್​ನಲ್ಲಿ24 ಗಂಟೆಗಳಲ್ಲಿ ವೀಕ್ಷಿಸಿದ್ದು ಎಷ್ಟು ಮಂದಿ ಗೊತ್ತೆ? ಬೆಂಗಳೂರು:  ಕಳೆದ ವರ್ಷ ತೆರೆಕಂಡ ʼಕಾಂತಾರʼ ಚಿತ್ರ (Kantara Movie) ಸೂಪರ್‌ ಹಿಟ್‌ ಆಗಿತ್ತು. ಕನ್ನಡ ಮಾತ್ರವಲ್ಲ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಅದರ ಎರಡನೇ ಭಾಗ ಬರುತ್ತದೆ ಎನ್ನುವಾಗಲೇ ಸಾಕಷ್ಟು ಕುತೂಹಲ ಮೂಡಿತ್ತು. ಅದರಂತೆ ನವೆಂಬರ್ 27ರಂದು ರಿಲೀಸ್ ಆದ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್ ದಾಖಲೆಯ ವೀಕ್ಷಣೆ ಕಂಡಿದೆ. ಏಳು ಭಾಷೆಗಳಲ್ಲಿ ರಿಲೀಸ್ ಆಗಿರುವ ಈ ಟೀಸರ್ ಬರೋಬ್ಬರಿ 12 ಮಿಲಿಯನ್ (1.2 ಕೋಟಿ) ಭಾರಿ ವೀಕ್ಷಣೆ ಕಂಡಿದೆ. ಈ ಮೂಲಕ ಹಲವು ದಾಖಲೆಗಳನ್ನು ಇದು ಸರಿಗಟ್ಟಿದೆ. ನವೆಂಬರ್ 27ರಂದು ಕುಂದಾಪುರ ಆನೆಗುಡ್ಡೆ ದೇವಾಲಯದಲ್ಲಿ ಚಿತ್ರತಂಡ ಸ್ಕ್ರಿಪ್ಟ್ ಪೂಜೆ ಮಾಡಿದೆ. ಜತೆಗೆ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿತ್ತು. ʼಕಾಂತಾರʼ ಚಿತ್ರವನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್‌ ಈ ಚಿತ್ರವನ್ನೂ ತಯಾರಿಸಲಿದೆ. ಈ ಬಾರಿ ಇತಿಹಾಸದ ನಿಗೂಢ ಸತ್ಯ ಹೇಳುವುದಕ್ಕೆ ರಿಷಬ್ ಶೆಟ್ಟಿ ತಯಾರಿ ಮಾಡಿಕೊಂಡಿದ್ದಾರೆ. ಕಾಡುಬೆಟ್ಟು ಶಿವನ ತಂದೆಯ ರಹಸ್ಯ ರಿವೀಲ್ ಮಾಡಲು ಹೊರಟ್ಟಿದ್ದಾರೆ ರಿಷಬ್‌. 2024ಕ್ಕೆ ‘ಕಾಂತಾರ-1’ ಚಿತ್ರಮಂದಿರಗಳಿಗೆ ಬರಲಿದೆ. ರಿಷಬ್ ಶೆಟ್ಟಿ ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಖಡ್ಗ ಹಿಡಿದಿರು...