Skip to main content

Posts

Showing posts from December, 2023

Kichcha Sudeep: ನಿಮ್ಗೆ ದರ್ಶನ್‌, ಯಶ್‌ ಮಾತ್ರ ಕಾಣೋದಾ? ಧ್ರುವ ಪರ ನಿಂತ ಸುದೀಪ್‌!

 Kichcha Sudeep: ನಟ ದರ್ಶನ್‌ ಮತ್ತು ಧ್ರುವ ಸರ್ಜಾ ನಡುವಿನ ಮನಸ್ತಾಪದ ಬಗ್ಗೆ ಚಿತ್ರರಂಗದಲ್ಲಿ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್‌ ಅವರು ಆಡಿರುವ ಮಾತುಗಳು ಕುತೂಹಲ ಮೂಡಿಸಿವೆ. ಬೆಂಗಳೂರು:  ನಟ ದರ್ಶನ್ ಹಾಗೂ ಸುದೀಪ್ ಇಬ್ಬರ ನಡುವೆ ಮನಸ್ತಾಪ ಇರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ, ಈ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಇಬ್ಬರು ಸ್ಟಾರ್‌ ನಟರ ಮಧ್ಯೆ ಎಲ್ಲವೂ ಸರಿಯಿಲ್ಲ ಎಂಬುವುದು ಮತ್ತೊಮ್ಮೆ ಬಹಿರಂಗವಾಗಿದ್ದು, ಇದಕ್ಕೆ ಕಾರಣ ಕಿಚ್ಚ ಸುದೀಪ್‌ ಅವರು ನೀಡಿರುವ ಹೇಳಿಕೆ. ಹೌದು, ಕೆಸಿಸಿ ಕ್ರಿಕೆಟ್‌ ಕಪ್‌ ಕುರಿತ ಸುದ್ದಿಗೋಷ್ಠಿಯಲ್ಲಿ ನಟ ಕಿಚ್ಚ ಸುದೀಪ್‌ ಅವರು ಆಡಿರುವ ಮಾತುಗಳು ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗೆ ಕಾವೇರಿ ನೀರಿಗಾಗಿ ನಡೆದ ಪ್ರತಿಭಟನೆ ವೇಳೆ ದರ್ಶನ್‌ ಮತ್ತು ಧ್ರುವ ಸರ್ಜಾ ಪರಸ್ಪರ ಮಾತನಾಡದ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ನಂತರ ದರ್ಶನ್‌ ಜತೆ ಮನಸ್ತಾಪ ಇರುವುದು ನಿಜ ಎಂದು ಧ್ರುವ ಹೇಳಿದ್ದರು. ಹೀಗಾಗಿ ಧ್ರುವ ಸರ್ಜಾರನ್ನು ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ್‌ ಅಭಿಮಾನಿಗಳು ಟ್ರೋಲ್‌ ಮಾಡಿದ್ದರು. ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ವರದಿಗಾರರೊಬ್ಬರು ಕೆಸಿಸಿ ಪಂದ್ಯಗಳಿಗೆ ದರ್ಶನ್, ಯಶ್, ರಿಷಬ್‌ ಶೆಟ್ಟಿ, ರಕ್ಷಿತ್‌ ಶೆಟ್ಟಿ, ರಾಜ್‌ ಬಿ ಶೆಟ್ಟಿ ಅವರನ್ನು ಕರೆದಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ...

Actress Leelavathi: ನಟಿ ಲೀಲಾವತಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ, ಡಿಸಿಎಂ ಸೇರಿ ಗಣ್ಯರು

 Actress Leelavathi: ರವೀಂದ್ರ ಕಲಾಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಎಸ್‌.ಯರಿಯೂರಪ್ಪ ಸೇರಿ ರಾಜಕೀಯ ನಾಯಕರು ಹಾಗೂ ಚಿತ್ರರಂಗದ ಗಣ್ಯರು, ನಟಿ ಲೀಲಾವತಿ ಅವರ ಅಂತಿಮ ದರ್ಶನ ಪಡೆದರು. ಬೆಂಗಳೂರು:  ನೆಲಮಂಗಲದ ಅಂಬೇಡ್ಕರ್‌ ಮೈದಾನದ ಬಳಿಕ ಹಿರಿಯ ನಟಿ ಲೀಲಾವತಿ ಅವರ (Actress Leelavathi) ಅಂತಿಮ ದರ್ಶನಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಎಸ್‌.ಯರಿಯೂರಪ್ಪ ಸೇರಿ ರಾಜಕೀಯ ನಾಯಕರು ಹಾಗೂ ಚಿತ್ರರಂಗದ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಅಂತಿಮ ದರ್ಶನ ಪಡೆದ ಬಳಿಕ ವಿನೋದ್‌ ರಾಜ್‌ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ತಬ್ಬಿಕೊಂಡು ಸಾಂತ್ವನ ಹೇಳಿದರು. ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಮಾಜಿ ಸಚಿವ ಸೋಮಣ್ಣ, ವಾಟಾಳ್‌ ನಾಗರಾಜ್‌, ನಟ ರಮೇಶ್‌ ಅರವಿಂದ್‌, ಉಪೇಂದ್ರ, ದ್ವಾರಕೀಶ್, ಶ್ರೀನಾಥ್‌, ಸಾಧು ಕೋಕಿಲ, ನಟಿ ತಾರಾ, ಶೃತಿ, ಉಮಾಶ್ರೀ, ಪೂಜಾ ಗಾಂಧಿ, ಸುಧಾರಾಣಿ ಮತ್ತಿತರ ಚಿತ್ರರಂಗದ ಕಲಾವಿದರು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು. ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರು ಲೀಲಾವತಿ ಅವರ ಅಂತಿಮ ದರ್ಶನ ಪಡೆದರು. ಡಿಸಿಎಂ ಡಿಕೆ ಶಿವಕುಮಾರ್‌ ಅವರು ಅಂತಿಮ ನಮನ ಸಲ್ಲಿಸಿದರು ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ದರ...

Kiccha Sudeep: ಬಿಗ್‌ಬಾಸ್‌ನಲ್ಲಿ ಬಾಲಿವುಡ್‌ನವರನ್ನು ಮೀರಿಸಿದ ಕಿಚ್ಚ ಸುದೀಪ್‌ ಡ್ರೆಸ್‌! ಏನಿದರ ಸ್ಪೆಷಲ್‌?

  ಬಿಗ್‌ಬಾಸ್‌ನಲ್ಲಿ ಕಿಚ್ಚ ಸುದೀಪ್‌ (Kiccha Sudeep) ವೀಕೆಂಡ್‌ನಲ್ಲಿ ಧರಿಸುವ ಯೂನಿಕ್‌ ಔಟ್‌ಫಿಟ್‌ಗಳನ್ನು ನೋಡಲು ಅಭಿಮಾನಿಗಳು ಮಾತ್ರವಲ್ಲ, ಫ್ಯಾಷನ್‌ ಪ್ರಿಯರು ಕಾದಿರುತ್ತಾರೆ. ಇದಕ್ಕೆ ಕಾರಣ ಪ್ರತಿಬಾರಿ ಅವರು ಧರಿಸುವ ಯೂನಿಕ್‌ ಫ್ಯಾಷನ್‌! ಅವರ ಈ ಡಿಫರೆಂಟ್‌ ಡಿಸೈನರ್‌ವೇರ್ಸ್ ಬಗ್ಗೆ ಇಲ್ಲಿದೆ ಸಂಕ್ಷೀಪ್ತ ಡಿಟೇಲ್ಸ್. ಬೆಂಗಳೂರು:  ಪ್ರತಿವಾರ ಬಿಗ್‌ಬಾಸ್‌ನಲ್ಲಿ ಕಿಚ್ಚ ಸುದೀಪ್‌ ಯಾವ ಔಟ್‌ಫಿಟ್‌ನಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಕುತೂಹಲ ಕೇವಲ ಅವರ ಅಭಿಮಾನಿಗಳಿಗಷ್ಟೇ ಅಲ್ಲ, ಫ್ಯಾಷನ್‌ ಪ್ರಿಯರಿಗೂ ಕುತೂಹಲವಿರುತ್ತದೆ. ಹೌದು. ಸುದೀಪ್‌ರವರು ಪ್ರತಿ ವೀಕೆಂಡ್‌ನಲ್ಲಿ ಧರಿಸುವ ಒಂದೊಂದು ಡಿಫರೆಂಟ್‌ ಔಟ್‌ಫಿಟ್‌ಗಳು ನೋಡುಗರ ಕಣ್ಣರಳಿಸುತ್ತವೆ. ಕೆಲವೊಮ್ಮೆ ಬಾಲಿವುಡ್‌ಗರನ್ನು ಮೀರಿಸುವಂತಹ ಹುಬ್ಬೇರಿಸುವಂತಹ ಫ್ಯೂಶನ್‌ ಡಿಸೈನರ್‌ವೇರ್‌ಗಳನ್ನು ಕಾಣಬಹುದು. ಈ ಡಿಸೈನರ್‌ವೇರ್‌ಗಳ ಹಿಂದಿರುವ ಡಿಸೈನರ್‌ಗಳ್ಯಾರು? ಡಿಸೈನ್‌ ಆಯ್ಕೆ ಹೇಗೆ? ಅಷ್ಟ್ಯಾಕೆ ದುಬಾರಿ ಎಂಬೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ವಿವರ. ವಾರಕ್ಕೆ ಇಬ್ಬರ ಡಿಸೈನರ್ಸ್ ಔಟ್‌ಫಿಟ್ಸ್ ಧರಿಸುವ ಸುದೀಪ್‌ ವಾರಕ್ಕೆ ಇಬ್ಬರ ಡಿಸೈನರ್ಸ್ ಔಟ್‌ಫಿಟ್ಸ್ ಧರಿಸುವ ಸುದೀಪ್‌ಗೆ ಸೂಟನ್ನು ರ‍್ಯಾಂಪ್‌ ಲೆಬೆಲ್‌ನ ಸೆಲೆಬ್ರೆಟಿ ಡಿಸೈನರ್‌ ಭರತ್‌ ರಾಮ್‌ದಾಸ್‌ ಸಿದ್ಧಪಡಿಸಿದರೇ, ಜಂಪ್‌ಸೂಟ್‌ನಂತವನ್ನು ಡಿಸೈನರ್‌ ಭರತ್‌ ಸಾಗರ್‌ ಸಿದ್ಧಪಡಿಸಿ, ಸ್ಟೈಲಿಂಗ್‌ ಮಾಡು...

Pooja Gandhi: ಮಳೆ ಹುಡುಗಿಗೆ ಮಂತ್ರ ಮಾಂಗಲ್ಯ; ಹೊಸ ಬಾಳಿಗೆ ಕಾಲಿಟ್ಟ ಪೂಜಾ ಗಾಂಧಿ

  Pooja Gandhi: ಬೆಂಗಳೂರಿನ ಉದ್ಯಮಿ ವಿಜಯ್ ಘೋರ್ಪಡೆ ಅವರೊಂದಿಗೆ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಚಿತ್ರ ರಂಗದ ಗಣ್ಯರು, ಅಭಿಮಾನಿಗಳು ನವದಂಪತಿಗೆ ಶುಭ ಹಾರೈಸಿದ್ದಾರೆ. ಬೆಂಗಳೂರು:  ನಟಿ ಪೂಜಾ ಗಾಂಧಿ (Pooja Gandhi) ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ಹಾಗೂ ಬಹುಕಾಲದ ಗೆಳೆಯ ವಿಜಯ್ ಘೋರ್ಪಡೆ ಅವರನ್ನು ಮಳೆ ಹುಡುಗಿ ಮದುವೆಯಾಗಿದ್ದು, ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಬಂಧು-ಮಿತ್ರರು, ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಸರಳವಾಗಿ ಬುಧವಾರ ವಿವಾಹವಾಗಿದ್ದಾರೆ. ವಿವಾಹ ಸಮಾರಂಭದಲ್ಲಿ ನಿರ್ದೇಶಕ ಯೋಗರಾಜ್ ಭಟ್, ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ. ಸುರೇಶ್, ಸಾಹಿತಿ ಜಯಂತ್ ಕಾಯ್ಕಿಣಿ, ನಟಿ ಸುಧಾರಣಿ, ಶುಭಾ ಪೂಂಜಾ, ನಿರ್ದೇಶಕಿ ಸುಮನಾ ಕಿತ್ತೂರು ಮತ್ತಿತರರು ಭಾಗವಹಿಸಿ, ನವ ದಂಪತಿಗೆ ಶುಭ ಕೋರಿದರು. ಮೂಲತಃ ಉತ್ತರ ಪ್ರದೇಶದವರಾದ ಪೂಜಾ ಗಾಂಧಿ ಕನ್ನಡ ಚಿತ್ರಗಳಲ್ಲಿ ಅಭಿನಯಿಸುತ್ತ ಬೆಂಗಳೂರಿನಲ್ಲೇ ಕೆಲವು ಸಮಯದಿಂದ ನೆಲೆಸಿದ್ದಾರೆ. ತಮ್ಮ ಕನ್ನಡ ಪ್ರೀತಿಯಿಂದಲೇ ಕನ್ನಡಿಗರ ಮನಸ್ಸು ಗೆದ್ದಿದ್ದಾರೆ. ಕನ್ನಡ ಮಾತನಾಡಲು ಅಷ್ಟೇ ಅಲ್ಲ ಓದಲು ಮತ್ತು ಬರೆಯಲು ಅವರು ಕಲಿತಿದ್ದು, ಮೆಚ್ಚುಗೆ ವ್ಯಕ್ತವಾಗಿದೆ. ವಿಜಯ್ ಅವರೇ ಪೂಜಾ ಗಾಂಧಿಯವರಿಗೆ ಕನ್ನಡ ಕಲಿಸಿರುವುದಾಗಿ ಮಾಹಿತಿ ಇದೆ. ಪೂಜಾ ಗಾಂಧಿ ಹಾಗೂ ವಿಜಯ್ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದರು. ಕನ್ನಡ ಕಲಿತು ಕ...