Skip to main content

Actress Leelavathi: ನಟಿ ಲೀಲಾವತಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ, ಡಿಸಿಎಂ ಸೇರಿ ಗಣ್ಯರು

 Actress Leelavathi: ರವೀಂದ್ರ ಕಲಾಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಎಸ್‌.ಯರಿಯೂರಪ್ಪ ಸೇರಿ ರಾಜಕೀಯ ನಾಯಕರು ಹಾಗೂ ಚಿತ್ರರಂಗದ ಗಣ್ಯರು, ನಟಿ ಲೀಲಾವತಿ ಅವರ ಅಂತಿಮ ದರ್ಶನ ಪಡೆದರು.

ಬೆಂಗಳೂರು: ನೆಲಮಂಗಲದ ಅಂಬೇಡ್ಕರ್‌ ಮೈದಾನದ ಬಳಿಕ ಹಿರಿಯ ನಟಿ ಲೀಲಾವತಿ ಅವರ (Actress Leelavathi) ಅಂತಿಮ ದರ್ಶನಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಎಸ್‌.ಯರಿಯೂರಪ್ಪ ಸೇರಿ ರಾಜಕೀಯ ನಾಯಕರು ಹಾಗೂ ಚಿತ್ರರಂಗದ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

ಅಂತಿಮ ದರ್ಶನ ಪಡೆದ ಬಳಿಕ ವಿನೋದ್‌ ರಾಜ್‌ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ತಬ್ಬಿಕೊಂಡು ಸಾಂತ್ವನ ಹೇಳಿದರು. ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಮಾಜಿ ಸಚಿವ ಸೋಮಣ್ಣ, ವಾಟಾಳ್‌ ನಾಗರಾಜ್‌, ನಟ ರಮೇಶ್‌ ಅರವಿಂದ್‌, ಉಪೇಂದ್ರ, ದ್ವಾರಕೀಶ್, ಶ್ರೀನಾಥ್‌, ಸಾಧು ಕೋಕಿಲ, ನಟಿ ತಾರಾ, ಶೃತಿ, ಉಮಾಶ್ರೀ, ಪೂಜಾ ಗಾಂಧಿ, ಸುಧಾರಾಣಿ ಮತ್ತಿತರ ಚಿತ್ರರಂಗದ ಕಲಾವಿದರು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು.

ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರು ಲೀಲಾವತಿ ಅವರ ಅಂತಿಮ ದರ್ಶನ ಪಡೆದರು.

ಡಿಸಿಎಂ ಡಿಕೆ ಶಿವಕುಮಾರ್‌ ಅವರು ಅಂತಿಮ ನಮನ ಸಲ್ಲಿಸಿದರು

ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ : ಮುಖ್ಯಮಂತ್ರಿ ಸಿದ್ದರಾಮಯ್ಯ



ಅಂತಿಮ ದರ್ಶನ ಪಡೆದು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕನ್ನಡ ಚಿತ್ರರಂಗ ಕಂಡಂತಹ ಬಹುಮುಖ ಪ್ರತಿಭೆಯಾಗಿದ್ದ ನಟಿ ಲೀಲಾವತಿಯವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರವನ್ನು ನೆರವೇರಿಸಲು ಆದೇಶಿಸಲಾಗಿದೆ ಎಂದು ತಿಳಿಸಿದರು.

ಲೀಲಾವತಿಯವರು ಅನಾರೋಗ್ಯದಿಂದ ಬಳಲುತ್ತಿದ್ದಾಗ ಅವರ ನಿವಾಸಕ್ಕೆ ತೆರಳಿ ಅವರ ಯೋಗಕ್ಷೇಮ ವಿಚಾರಿಸಿದ್ದೆ. ಆಗ ಅವರ ಮಗ ವಿನೋದರಾಜ್ ರನ್ನು ಭೇಟಿಯಾಗಿ, ಅವರಿಗೆ ಯಾವುದೇ ರೀತಿಯ ಸಹಾಯ ಮಾಡಲು ಸರ್ಕಾರ ಸಿದ್ಧವಿದೆ ಎಂದು ಧೈರ್ಯ ತುಂಬಲಾಗಿತ್ತು. ಲೀಲಾವತಿ ಹಾಗೂ ವಿನೋದರಾಜ್ ಅವರ ತಾಯಿಮಗನ ಸಂಬಂಧ ಆದರ್ಶಮಯವಾದದ್ದು ಎಂದರು.


ನೈಜ್ಯ ನಟನೆ

ರಂಗಭೂಮಿಯಿಂದ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಲೀಲಾವತಿಯವರು 600ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ನೈಜ್ಯ ನಟನೆಗೆ ಹೆಸರಾಗಿದ್ದ ಅವರು ದಕ್ಷಿಣ ಭಾರತದ ಎಲ್ಲ ಭಾಷಾ ಚಿತ್ರರಂಗದಲ್ಲಿ ನಟಿಸಿದ್ದಾರೆ. ಬಹುಭಾಷಾ ಕಲಾವಿದರಾಗಿದ್ದ ಲೀಲಾವತಿಯವರು ನಾಯಕಿ, ಪೋಷಕ ನಟಿಯಾಗಿ ಪಾತ್ರಗಳಿಗೆ ಜೀವ ತುಂಬುತ್ತಿದ್ದರು. ಡಾ. ರಾಜ್ ಕುಮಾರ್ ಹಾಗೂ ಲೀಲಾವತಿಯವರದು ಜನಪ್ರಿಯ ಜೋಡಿಯಾಗಿದ್ದು, ತನ್ನ ವಿದ್ಯಾರ್ಥಿ ದೆಸೆಯಲ್ಲಿ ಗೆಜ್ಜೆಪೂಜೆ, ಕುಲವಧು, ಭಕ್ತ ಕುಂಬಾರ ಸೇರಿದಂತೆ ಅನೇಕ ಚಲನಚಿತ್ರಗಳನ್ನು ವೀಕ್ಷಿಸಿರುವುದಾಗಿ ಮುಖ್ಯಮಂತ್ರಿಗಳು ಸ್ಮರಿಸಿದರು.



ಪ್ರಾಣಿಗಳನ್ನು ಕಂಡರೆ ಪ್ರೀತಿ

ಲೀಲಾವತಿಯವರು ಒಬ್ಬ ಪರಿಪೂರ್ಣ ಕಲಾವಿದರಾಗಿದ್ದರು. ಐತಿಹಾಸಿಕ, ಸಾಮಾಜಿಕ, ಪೌರಾಣಿಕ ಪಾತ್ರಗಳನ್ನು ಲೀಲಾಜಾಲವಾಗಿ, ಮನೋಜ್ಞವಾಗಿ ಅಭಿನಯಿಸುತ್ತಿದ್ದರು. ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಲೀಲಾವತಿಯವರು ಆಸ್ಪತ್ರೆ, ಪಶುವೈದ್ಯಕೀಯ ಆಸ್ಪತ್ರೆ ಗಳನ್ನು ನಿರ್ಮಿಸಿದ್ದರು. ರೈತಾಪಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದ ಲೀಲಾವತಿಯವರು ಪ್ರಾಣಿಗಳನ್ನು ಪ್ರೀತಿಯಿಂದ ಕಾಣುತ್ತಿದ್ದರು. ಪ್ರಾಣಿಗಳೆಡೆಗಿನ ಪ್ರೀತಿ ಅವರಿಗೆ ರಕ್ತಗತವಾಗಿ ಬಂದಿದೆ ಎಂದು ಸಿಎಂ ತಿಳಿಸಿದರು.



ಮನುಷ್ಯತ್ವದ ಮೂರ್ತರೂಪ

ಕರೋನಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡುತ್ತಿದ್ದ ಲೀಲಾವತಿಯವರು ಮನುಷ್ಯತ್ವದ ಮೂರ್ತರೂಪವಾಗಿದ್ದರು. ತಾನು ಗಳಿಸಿದ್ದನ್ನು ಪರರಿಗೆ ಹಂಚುವ ದೊಡ್ಡ ಗುಣ ಅವರಲ್ಲಿತ್ತು. ಅವರ ಪ್ರತಿಭೆಗೆ ಪದ್ಮಶ್ರೀ ಪ್ರಶಸ್ತಿ ಯಂತಹ ರಾಷ್ಟ್ರಮಟ್ಟದ ಪ್ರಶಸ್ತಿ ದೊರೆಯದಿರುವುದು ದುರಂತ ಎಂದು ಮುಖ್ಯಮಂತ್ರಿ ತಿಳಿಸಿದರು.



ನಟಿ ಲೀಲಾವತಿ ಯವರ ಸಾವು ಆಘಾತವನ್ನುಂಟು ಮಾಡಿದ್ದು, ಕನ್ನಡ ಚಿತ್ರರಂಗವಲ್ಲದೇ , ಭಾರತೀಯ ಸಿನಿಮಾ ರಂಗಕ್ಕೂ ಲೀಲಾವತಿಯವರ ನಿಧನದಿಂದ ತುಂಬಲಾರದ ನಷ್ಟವುಂಟಾಗಿದೆ. ಅವರ ಕುಟುಂಬ ಹಾಗೂ ಅಪಾರ ಅಭಿಮಾನ ಬಳಗಕ್ಕೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಸಿಎಂ ಹಾರೈಸಿದರು.

ಮೂಲತಃ ಲೇಖನವನ್ನು ಇಲ್ಲಿ ಪ್ರಕಟಿಸಲಾಗಿದೆ: 👉 Kannada News

ಇಂತಹ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 👉today kannada news

Comments

Popular posts from this blog

Kichcha Sudeep: ನಿಮ್ಗೆ ದರ್ಶನ್‌, ಯಶ್‌ ಮಾತ್ರ ಕಾಣೋದಾ? ಧ್ರುವ ಪರ ನಿಂತ ಸುದೀಪ್‌!

 Kichcha Sudeep: ನಟ ದರ್ಶನ್‌ ಮತ್ತು ಧ್ರುವ ಸರ್ಜಾ ನಡುವಿನ ಮನಸ್ತಾಪದ ಬಗ್ಗೆ ಚಿತ್ರರಂಗದಲ್ಲಿ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್‌ ಅವರು ಆಡಿರುವ ಮಾತುಗಳು ಕುತೂಹಲ ಮೂಡಿಸಿವೆ. ಬೆಂಗಳೂರು:  ನಟ ದರ್ಶನ್ ಹಾಗೂ ಸುದೀಪ್ ಇಬ್ಬರ ನಡುವೆ ಮನಸ್ತಾಪ ಇರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ, ಈ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಇಬ್ಬರು ಸ್ಟಾರ್‌ ನಟರ ಮಧ್ಯೆ ಎಲ್ಲವೂ ಸರಿಯಿಲ್ಲ ಎಂಬುವುದು ಮತ್ತೊಮ್ಮೆ ಬಹಿರಂಗವಾಗಿದ್ದು, ಇದಕ್ಕೆ ಕಾರಣ ಕಿಚ್ಚ ಸುದೀಪ್‌ ಅವರು ನೀಡಿರುವ ಹೇಳಿಕೆ. ಹೌದು, ಕೆಸಿಸಿ ಕ್ರಿಕೆಟ್‌ ಕಪ್‌ ಕುರಿತ ಸುದ್ದಿಗೋಷ್ಠಿಯಲ್ಲಿ ನಟ ಕಿಚ್ಚ ಸುದೀಪ್‌ ಅವರು ಆಡಿರುವ ಮಾತುಗಳು ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗೆ ಕಾವೇರಿ ನೀರಿಗಾಗಿ ನಡೆದ ಪ್ರತಿಭಟನೆ ವೇಳೆ ದರ್ಶನ್‌ ಮತ್ತು ಧ್ರುವ ಸರ್ಜಾ ಪರಸ್ಪರ ಮಾತನಾಡದ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ನಂತರ ದರ್ಶನ್‌ ಜತೆ ಮನಸ್ತಾಪ ಇರುವುದು ನಿಜ ಎಂದು ಧ್ರುವ ಹೇಳಿದ್ದರು. ಹೀಗಾಗಿ ಧ್ರುವ ಸರ್ಜಾರನ್ನು ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ್‌ ಅಭಿಮಾನಿಗಳು ಟ್ರೋಲ್‌ ಮಾಡಿದ್ದರು. ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ವರದಿಗಾರರೊಬ್ಬರು ಕೆಸಿಸಿ ಪಂದ್ಯಗಳಿಗೆ ದರ್ಶನ್, ಯಶ್, ರಿಷಬ್‌ ಶೆಟ್ಟಿ, ರಕ್ಷಿತ್‌ ಶೆಟ್ಟಿ, ರಾಜ್‌ ಬಿ ಶೆಟ್ಟಿ ಅವರನ್ನು ಕರೆದಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ...

Kannada New Movie: ಸೆಟ್ಟೇರಿಯೇ ಬಿಡ್ತು ಚಟ್ಟ ಸಿನಿಮಾ; ನೀವಂದುಕೊಂಡಂತಲ್ಲ ಇದು!

  Kannada New Movie: ಬಗೆಬಗೆಯ ಶೀರ್ಷಿಕೆಗಳ ಮೂಲಕವೇ ಸಿನಿಮಾಗಳು ಗಮನ ಸೆಳೆಯುತ್ತಿವೆ. ಇದೀಗ ಅಂಥದ್ದೇ ವಿಭಿನ್ನ ಸಿನಿಮಾ ಮೂಲಕ ಗಮನ ಸೆಳೆಯುತ್ತಿದೆ ‘ಚಟ್ಟ’ ಸಿನಿಮಾ. ಬೆಂಗಳೂರು:  ಶೀರ್ಷಿಕೆಯೇ ಸಿನಿಮಾ (Kannada New Movie) ಪ್ರೇಕ್ಷಕರಿಗೆ ಮೊದಲ ಆಮಂತ್ರಣ. ಸಿನಿಮಾ ಮೇಕರ್‌ಗಳು ಅದನ್ನೇ ಗಮನದಲ್ಲಿಟ್ಟುಕೊಂಡು ಏನಾದರೊಂದು ಹೊಸದನ್ನು ನೀಡಬೇಕೆನ್ನುವ ಆಶಯ ನಿರ್ಮಾಪಕರದ್ದು. ಈ ನಡುವೆ ಬಗೆಬಗೆಯ ಶೀರ್ಷಿಕೆಗಳ ಮೂಲಕವೇ ಸಿನಿಮಾಗಳು ಸೆಟ್ಟೇರುತ್ತಿವೆ. ಇದೀಗ ಅಂಥದ್ದೇ ವಿಭಿನ್ನ ಸಿನಿಮಾ ಮೂಲಕ ಗಮನ ಸೆಳೆಯುತ್ತಿದೆ ‘ಚಟ್ಟ’ ಸಿನಿಮಾ. ನಿರ್ದೇಶಕ ಭಾನು ಪ್ರಕಾಶ್ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶನದ ಅಖಾಡಕ್ಕೆ ಧುಮುಕಿದ್ದಾರೆ. ‘ಕೇರ್ ಆಫ್ ಫುಟ್ಬಾತ್’ ಸೇರಿದಂತೆ ಒಂದಷ್ಟು ಕನ್ನಡ ಹಾಗೂ ತೆಲುಗು ಇಂಡಸ್ಟ್ರೀಯಲ್ಲಿಯೂ ನಿರ್ದೇಶನದ ಪಟ್ಟುಗಳನ್ನು ಕಲಿತುಕೊಂಡಿರುವ ಭಾನು ಪ್ರಕಾಶ್, ಈ ಭರವಸೆಯೊಂದಿಗೆ ಚಟ್ಟ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಅದ್ಧೂರಿಯಾಗಿ ಸೆಟ್ ಹಾಕಿ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಮಾಡಲಾಗಿದೆ. ಕವಿರತ್ನ ವಿ.ನಾಗೇಂದ್ರ ಪ್ರಸಾದ್, ನಿರ್ದೇಶಕ ಜೋಸೈಮನ್ ಮುಖ್ಯ ಅತಿಥಿಗಳಾಗಿ ಭಾಗಿಯಾಗಿ ಭಾನು ಪ್ರಕಾಶ್ ಹೊಸ ಕನಸಿಗೆ ಜತೆಯಾದರು. ಈ ವೇಳೆ ನಿರ್ದೇಶಕ ಭಾನು ಪ್ರಕಾಶ್ ಮಾತನಾಡಿ, ʻʻಚಟ್ಟ ಎಂದರೆ ನಾವು ಅಂದುಕೊಂಡಂತೆ ಎತ್ತಿಕೊಂಡು ಹೋಗುವುದಲ್ಲ....

Kantara Movie: ಯೂಟ್ಯೂಬ್​ನಲ್ಲಿ ದಾಖಲೆ ಬರೆದ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್; ವೀವ್ಸ್ ಎಷ್ಟು?

 K antara Movie: ಯೂಟ್ಯೂಬ್​ನಲ್ಲಿ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್ ದಾಖಲೆ ಬರೆದಿದೆ. ಯೂಟ್ಯೂಬ್​ನಲ್ಲಿ24 ಗಂಟೆಗಳಲ್ಲಿ ವೀಕ್ಷಿಸಿದ್ದು ಎಷ್ಟು ಮಂದಿ ಗೊತ್ತೆ? ಬೆಂಗಳೂರು:  ಕಳೆದ ವರ್ಷ ತೆರೆಕಂಡ ʼಕಾಂತಾರʼ ಚಿತ್ರ (Kantara Movie) ಸೂಪರ್‌ ಹಿಟ್‌ ಆಗಿತ್ತು. ಕನ್ನಡ ಮಾತ್ರವಲ್ಲ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಅದರ ಎರಡನೇ ಭಾಗ ಬರುತ್ತದೆ ಎನ್ನುವಾಗಲೇ ಸಾಕಷ್ಟು ಕುತೂಹಲ ಮೂಡಿತ್ತು. ಅದರಂತೆ ನವೆಂಬರ್ 27ರಂದು ರಿಲೀಸ್ ಆದ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್ ದಾಖಲೆಯ ವೀಕ್ಷಣೆ ಕಂಡಿದೆ. ಏಳು ಭಾಷೆಗಳಲ್ಲಿ ರಿಲೀಸ್ ಆಗಿರುವ ಈ ಟೀಸರ್ ಬರೋಬ್ಬರಿ 12 ಮಿಲಿಯನ್ (1.2 ಕೋಟಿ) ಭಾರಿ ವೀಕ್ಷಣೆ ಕಂಡಿದೆ. ಈ ಮೂಲಕ ಹಲವು ದಾಖಲೆಗಳನ್ನು ಇದು ಸರಿಗಟ್ಟಿದೆ. ನವೆಂಬರ್ 27ರಂದು ಕುಂದಾಪುರ ಆನೆಗುಡ್ಡೆ ದೇವಾಲಯದಲ್ಲಿ ಚಿತ್ರತಂಡ ಸ್ಕ್ರಿಪ್ಟ್ ಪೂಜೆ ಮಾಡಿದೆ. ಜತೆಗೆ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿತ್ತು. ʼಕಾಂತಾರʼ ಚಿತ್ರವನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್‌ ಈ ಚಿತ್ರವನ್ನೂ ತಯಾರಿಸಲಿದೆ. ಈ ಬಾರಿ ಇತಿಹಾಸದ ನಿಗೂಢ ಸತ್ಯ ಹೇಳುವುದಕ್ಕೆ ರಿಷಬ್ ಶೆಟ್ಟಿ ತಯಾರಿ ಮಾಡಿಕೊಂಡಿದ್ದಾರೆ. ಕಾಡುಬೆಟ್ಟು ಶಿವನ ತಂದೆಯ ರಹಸ್ಯ ರಿವೀಲ್ ಮಾಡಲು ಹೊರಟ್ಟಿದ್ದಾರೆ ರಿಷಬ್‌. 2024ಕ್ಕೆ ‘ಕಾಂತಾರ-1’ ಚಿತ್ರಮಂದಿರಗಳಿಗೆ ಬರಲಿದೆ. ರಿಷಬ್ ಶೆಟ್ಟಿ ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಖಡ್ಗ ಹಿಡಿದಿರು...